ಸಾಮಾಜಿಕ

ಮದುವೆ ಮೊದಲು ಜನಿಸಿದವರಿಗೆ ಪಿತ್ರಾರ್ಜಿತ ಆಸ್ತಿ: ಸುಪ್ರೀಂ ಕೋರ್ಟ್

Views: 0

ಮದುವೆಗೂ ಮುನ್ನ ಜೋಡಿಗೆ ಜನಿಸಿದ ಮಕ್ಕಳಿಗೆ ಹಿಂದೂ ಉತ್ತರಾಧಿಕಾರ ಕಾಯ್ದೆಯಡಿ ಪಿತ್ರಾರ್ಜಿತ ಆಸ್ತಿ ಹಕ್ಕು ಕುರಿತು ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಹೇಳಿದೆ.

ಅರ್ಜಿಗೆ ಸಂಬಂಧಿಸಿದಂತೆ ಹಲವು ವಕೀಲರು ಮಂಡಿಸಿದ ವಾದಗಳನ್ನು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ, ನ್ಯಾಯಮೂರ್ತಿಗಳಾದ ಪ್ರದೀಪ್ ವಾಲಾ ಹಾಗೂ ಮನೋಜ್ ಮಿಶ್ರ ಅವರಿದ್ದ ನ್ಯಾಯಪೀಠ

‘ವಿವಾಹವಾಗುವುದಕ್ಕೂ ಮೊದಲ ಜೋಡಿಗೆ ಜನಿಸಿದ ಮಕ್ಕಳು ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 16(3) ರಡಿ ಪಾಲಕರ ಸ್ವಯಾರ್ಜಿತ ಆಸ್ತಿ ಮೇಲಷ್ಟೇ ಹಕ್ಕು ಹೊಂದಿದ್ದಾರೆಯೇ ಎಂಬ ಬಗ್ಗೆಯೂ ನ್ಯಾಯಪೀಠ ನಿರ್ಧಾರ ಪ್ರಕಟಿಸಲಿದೆ.’

ಈ ವಿಷಯ ಕುರಿತು ಅರ್ಜಿ 2011 ರಿಂದ ಬಾಕಿ ಉಳಿದಿದೆ.ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳು ಅರ್ಜಿಯನ್ನು ತಿರಸ್ಕೃತ ನ್ಯಾಯ ಪೀಠಕ್ಕೆ ವರ್ಗಾಯಿಸಿ 2011 ಮಾರ್ಚ್ 31 ರಂದು ಆದೇಶಿಸಿದೆ.

ಕಾನೂನು ಸಮ್ಮತ ವಿವಾಹ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಪೂರ್ವಿಕರ ಆಸ್ತಿಯಲ್ಲಿ ಪಾಲು ಪಡೆಯಲು ಹಕ್ಕಿದೆಯೇ ಅಥವಾ ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 16(3 )ಅಡಿ ತಮ್ಮ ಪಾಲಕರ ಸ್ವಯಮಾರ್ಜಿತ ಆಸ್ತಿ ಮೇಲಷ್ಟೇ ಹಕ್ಕಿದೆಯೇ ಎಂಬುದೇ ಈ ಪ್ರಕರಣದ ಮುಖ್ಯ ಪ್ರಶ್ನೆಯಾಗಿದೆ ಎಂದು ನ್ಯಾಯ ಪೀಠ ಹೇಳಿತು.

ರದ್ದುಗೊಳಿಸಲಾದ ಅಥವಾ ರದ್ದುಗೊಳಿಸಬಹುದಾದ ವಿವಾಹ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಮಾತ್ರ ಪಾಲಕರ ಆಸ್ತಿ ಮೇಲೆ ಹಕ್ಕಿದೆ ಎಂದು ಕಾಯ್ದೆಯಲ್ಲಿ ಹೇಳಲಾಗಿದೆ.

Related Articles

Back to top button
error: Content is protected !!