ಮಧ್ಯಪ್ರದೇಶ: ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ ಹೇಳುವುದೇನು?

Views: 0
ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಮತದಾನ ನಡೆಯಲಿದೆ. ಮಧ್ಯಪ್ರದೇಶದ ಒಟ್ಟು 230 ಸ್ಥಾನಗಳ ಪೈಕಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) 119 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಬಿಜೆಪಿಯು ಸ್ಪಷ್ಟ ಬಹುಮತದೊಂದಿಗೆ ಗೆಲ್ಲುವ ಮೂಲಕ ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ ಹೇಳಿದೆ.
230 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಐದು ವರ್ಷಗಳ ಹಿಂದೆ ಗೆದ್ದಿದ್ದ ಬಿಜೆಪಿ 109 ಸ್ಥಾನಗಳನ್ನು ಗೆದ್ದಿತ್ತು. ಈಗ ಬಿಜೆಪಿ 119 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆಯು ಹೇಳಿದೆ. ಕಳೆದ ಚುನಾವಣೆಯಲ್ಲಿ 114 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದ್ದ ಕಾಂಗ್ರೆಸ್ 107 ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.
ಪಕ್ಷೇತರರು ನಾಲ್ಕು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಕಳೆದ ಚುನಾವಣೆಯಲ್ಲಿ ಏಳು ಸ್ಥಾನಗಳನ್ನು ಸ್ವತಂತ್ರ ಮತ್ತು ಸ್ಥಳೀಯ ಪಕ್ಷಗಳು ಗೆದ್ದಿದ್ದವು.
ಬಿಜೆಪಿ ಶೇ 46.33, ಕಾಂಗ್ರೆಸ್ ಶೇ 43.24 ಮತ್ತು ಪಕ್ಷೇತರರು ಶೇ 10.43 ಮತಗಳನ್ನು ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ.






