ಮನೆಯಲ್ಲಿ ಒಂದೇ ಕುಟುಂಬದ ಐವರು ಅನುಮಾನಸ್ಪದ ಶವವಾಗಿ ಪತ್ತೆ
Views: 53
ಕನ್ನಡ ಕರಾವಳಿ ಸುದ್ದಿ: ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆ ಅಮಾಪುರದ ಕೋಟ್ವಾಲಿ ವ್ಯಾಪ್ತಿಯ ಏಟಾ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಮನೆಯಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಸತ್ಯವೀರ್ ಅಲಿಯಾಸ್ ಶ್ಯಾಮವೀರ್ ‘ಫೌಜಿ’ (50), ಅವರ ಪತ್ನಿ ರಾಮಶ್ರೀ (48), ಪುತ್ರಿಯರಾದ ಪ್ರಾಚಿ (12) ಮತ್ತು ಅಮರವತಿ (10), ಹಾಗೂ ಪುತ್ರ ಗಿರೀಶ್ (9) ಎಂದು ಗುರುತಿಸಲಾಗಿದೆ. ಐವರ ಅನುಮಾನಸ್ಪದವಾಗಿ ಸಾವಿನ್ನಪ್ಪಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ ಸತ್ಯವೀರ್ ವೃತ್ತಿಯಲ್ಲಿ ವೆಲ್ಡರ್ ಆಗಿದ್ದು, ಕಳೆದ 2-3 ದಿನಗಳಿಂದ ಕುಟುಂಬದವರು ಮನೆಯಿಂದ ಹೊರಬಂದಿರಲಿಲ್ಲ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಮನೆ ಬಾಗಿಲು ಒಳಗಿನಿಂದ ಬೀಗ ಹಾಕಲ್ಪಟ್ಟಿರುವುದು ಗೊತ್ತಾಗಿದೆ. ಹೀಗಾಗಿ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಸತ್ಯವೀರ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಅವರ ಪತ್ನಿ ಮತ್ತು ಮೂವರು ಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟಿದ್ದರು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿರುವ ಅನುಮಾನ ವ್ಯಕ್ತವಾಗಿದ್ದು, ತನಿಖೆ ಮುಂದುವರೆದಿದೆ.






