ಇತರೆ

ಮನೆಯಿಂದ ಹೊರಹೋದ ಯುವತಿ ನಾಪತ್ತೆ

Views: 30

ಕನ್ನಡ ಕರಾವಳಿ ಸುದ್ದಿ:ಮನೆಯಿಂದ ಹೊರಗೆ ಹೋದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ.

ನಾಪತ್ತೆಯಾದವರು ಸಾಬಿರಾ ಬಾನು ಎಂದು ತಿಳಿಯಲಾಗಿದೆ.

ಯುವತಿ ಸಾಬಿರಾ ಬಾನು ಅವರು ಮನೆಯಿಂದ ಹೊರಗೆ ತೆರಳಿದ್ದು, ಬಳಿಕ ವಾಪಸ್ ಬಂದಿರಲಿಲ್ಲ. ಸಂಬಂಧಿಕರು ಪರಿಚಿತರ ಮನೆ, ಸಂಬಂಧಿಕರಲ್ಲಿ ಹುಡುಕಾಡಿದರೂ ಆಕೆಯ ಯಾವುದೇ ಸುಳಿವು ಸಿಕ್ಕಿಲ್ಲ.

ಸಾಬಿರಾ ಬಾನು ಪತ್ತೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮೂಡಬಿದ್ರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ಯುವತಿಯ ಮೊಬೈಲ್ ಲೊಕೇಶನ್, ಆಕೆಯ ಸ್ನೇಹಿತರು ಮತ್ತು ಸಂಬಂಧಿಕರ ವಿಚಾರಣೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ CCTV ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ.

ಯಾರಾದರೂ ಸಾಬಿರಾ ಬಾನು ಅವರನ್ನು ನೋಡಿದ್ದರೆ ಅಥವಾ ಅವರ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಮೂಡಬಿದ್ರೆ ಪೊಲೀಸ್ ಠಾಣೆಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Related Articles

Back to top button
error: Content is protected !!