ಜನಮನ

ಮನೆ ಕೆಲಸಕ್ಕಿದ್ದ ದಂಪತಿಯಿಂದಲೇ ಬರೋಬ್ಬರಿ 18 ಕೋಟಿ ಚಿನ್ನಾಭರಣ ಲೂಟಿ

Views: 131

ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನ ಮಾರತ್ ಹಳ್ಳಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನದ ಪ್ರಕರಣ ನಡೆದಿದ್ದು. ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಮನೆ ಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿದ್ದ ದಂಪತಿಯೇ ಕೃತ್ಯವೆಸಗಿರುವುದು ಬಯಲಾಗಿದೆ.

ಬಂಗಾರ ದೋಚುತ್ತಿದ್ದ ಆರೋಪಿಗಳು ನೇಪಾಳಿ ದಂಪತಿಯಾಗಿದ್ದು, ಬಂಧನಕ್ಕಾಗಿ ಬಲೆ ಬೀಸಲಾಗಿದೆ. ಆರೋಪಿಗಳು ದಿನೇಶ್ ಹಾಗೂ ಕಮಲ ಅಥವಾ ಸಲೀನಾ ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಮನೆಕೆಲಸಕ್ಕೆ ಸೇರಿ ಕಳ್ಳತನ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಈ ದಂಪತಿ ದೇಶದ ಅನೇಕ ಭಾಗಗಳಲ್ಲಿ ಇದೇ ರೀತಿಯ ಕೃತ್ಯಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ. 2025ರ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಿವೃತ್ತ ಸರ್ಕಾರಿ ಅಧಿಕಾರಿಯ ಮನೆಯಲ್ಲಿ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರೆಂದು ಕಾರ್ಯಾಚರಣೆ ವೇಳೆ ತಿಳಿದುಬಂದಿದೆ.

Related Articles

Back to top button
error: Content is protected !!