ಇತರೆ
ಮನೆ ನಾಯಿಗೆ ದೀರ್ಘಕಾಲದ ಅನಾರೋಗ್ಯ: ಇಬ್ಬರು ಸಹೋದರಿಯರು ಫಿನೈಲ್ ಸೇವಿಸಿ ಆತ್ಮಹತ್ಯೆ
Views: 48
ಕನ್ನಡ ಕರಾವಳಿ ಸುದ್ದಿ: ಉತ್ತರ ಪ್ರದೇಶದ ಲಕ್ನೋದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಬ್ಬರು ಸಹೋದರಿಯರು ತಮ್ಮ ಸಾಕು ನಾಯಿಯ ಅನಾರೋಗ್ಯದಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ರಾಧಾ ಸಿಂಗ್ ಮತ್ತು ಜಿಯಾ ಸಿಂಗ್ ಮೃತ ಸಹೋದರಿಯರು. ಇವರಿಬ್ಬರು ಹಲವು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಪದವಿ ಓದಿಕೊಂಡಿದ್ದ ಇವರಿಬ್ಬರು, 2024ರಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರು ಚಿಕಿತ್ಸೆ ಕೂಡ ಪಡೆಯುತ್ತಿದ್ದರು.
ಈ ಮಧ್ಯೆ ಇವರಿಬ್ಬರು ಪ್ರೀತಿಯಿಂದ ಸಾಕಿದ್ದ ನಾಯಿ ಅನಾರೋಗ್ಯಕ್ಕೆ ಒಳಗಾಗಿತ್ತು. ಇದರಿಂದ ತುಂಬಾ ದುಃಖಿತರಾಗಿದ್ದರು. ತಾಯಿ ದಿನಸಿ ತರಲು ಕಳುಹಿಸಿದಾಗ ಫಿನೈಲ್ ಖರೀದಿಸಿ ಸೇವಿಸಿದ್ದಾರೆ. ಕೂಡಲೇ ಅಸ್ವಸ್ಥರಾದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.






