ಮರಕ್ಕೆ ಕಾರು ಡಿಕ್ಕಿಯಾಗಿ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು
Views: 127
ಕನ್ನಡ ಕರಾವಳಿ ಸುದ್ದಿ: ಮರಕ್ಕೆ ಕಾರು ಡಿಕ್ಕಿಯಾಗಿ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಮುಸ್ಟೂರು – ಕಡಬನಕಟ್ಟೆ ಗ್ರಾಮದ ಮಧ್ಯೆ ಬುಧವಾರ ಸಂಭವಿಸಿದೆ.
ರಘುನಾಥ್ (45) ಅಪಘಾತದಲ್ಲಿ ಸಾವನ್ನಪ್ಪಿದ ಸಿಪಿಐ. ಸದ್ಯ ಇವರು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಚಿತ್ರದುರ್ಗದ ಕಡೆಯಿಂದ ಜಗಳೂರು ಕಡೆಗೆ ಬರುತ್ತಿರುವಾಗ ಅಪಘಾತ ಜರುಗಿದೆ.
ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ರಘುನಾಥ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ರಘುನಾಥ್ ಅವರು ದಕ್ಷ ಅಧಿಕಾರಿಯಾಗಿ ಗುರಿತಿಸಿಕೊಂಡಿದ್ದರು ಎಂದು ರಾಜ್ಯ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.
ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಅಲ್ಲಿನ ಸಿಪಿಐ ಸಿದ್ದರಾಮಯ್ಯ ಭೇಟಿ ಪರಿಶೀಲನೆ ನಡೆಸಿದ್ದಾರೆ.






