ಯುವಜನ

ಮರಕ್ಕೆ ಕಾರು ಡಿಕ್ಕಿ ಹೊಡೆದು ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸಾವು

Views: 25

ಕನ್ನಡ ಕರಾವಳಿ ಸುದ್ದಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ಇಬ್ಬರು ವಿದ್ಯಾರ್ಥಿನಿಯರು  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ  ಗಾನವಿ (20), ವೈಷ್ಣವಿ (20) ಮೃತ ವಿದ್ಯಾರ್ಥಿಗಳು.

ಕುಣಿಗಲ್‌ನಲ್ಲಿ ಪ್ರಾಜೆಕ್ಟ್ ವರ್ಕ್ ಇದ್ದ ಹಿನ್ನೆಲೆ ಇಬ್ಬರು ಯುವಕರು, ನಾಲ್ವರು ಯುವತಿಯರು ಸೇರಿ 6 ಮಂದಿ ವಿದ್ಯಾರ್ಥಿಗಳು ಬೆಂಗಳೂರಿನಿಂದ ಕುಣಿಗಲ್‌ಗೆ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ನಾಲ್ವರ ಸ್ಥಿತಿ ಗಂಭೀರವಾಗಿದೆ. ಈ ಪೈಕಿ ಇಬ್ಬರು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಇನ್ನಿಬ್ಬರಿಗೆ ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿದ್ದೆ ಮಂಪರಿನಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button
error: Content is protected !!