ಮರವಂತೆ:ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ
ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಧನಾ ಸಮಾಜ ಸೇವಾ ವೇದಿಕೆ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಮುದ್ದು ಮನೆ ಶಿರೂರು ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸಾಧನಾ ಸಮುದಾಯ ಭವನದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು.129 ಜನರ ನೇತ್ರ ತಪಾಸಣೆ ನಡೆಸಿ, 31 ಜನರನ್ನು ಕಣ್ಣಿನ ಪೊರೆ ಚಿಕಿತ್ಸೆಗೆ ಆಯ್ಕೆ ಮಾಡಿದರು. 57 ಜನರಿಗೆ ಆಸ್ಪತ್ರೆಗೆ ಬಂದು ಹೆಚ್ಚಿನ ತಪಾಸಣೆ ಮಾಡಿಸಿಕೊಳ್ಳಬೇಕು --- ನೇತ್ರ ತಜ್ಞ ಡಾ. ಅಭಿನಯ್

Views: 0
ಕುಂದಾಪುರ: ಕಣ್ಣಿನ ನಿಯತಕಾಲಿಕ ತಪಾಸಣೆ ಅಗತ್ಯ. ಕಣ್ಣು ಮಾನವ ಶರೀರದ ಅತಿ ಸೂಕ್ಷ್ಮ ಮತ್ತು ಮಹತ್ವದ ಅಂಗ. ಅದನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಅದರ ನಿಯತಕಾಲಿಕ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಕೆ. ಗಣೇಶ ಭಟ್ ಹೇಳಿದರು.
ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಧನಾ ಸಮಾಜ ಸೇವಾ ವೇದಿಕೆ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಮುದ್ದು ಮನೆ ಶಿರೂರು ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸಾಧನಾ ಸಮುದಾಯ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಕಣ್ಣಿನ ಪೊರೆಯನ್ನು ಆಧುನಿಕ ಶಸ್ತೃಚಿಕಿತ್ಸಾ ಕ್ರಮದಿಂದ ಈಗ ಸಂಪೂರ್ಣವಾಗಿ ನಿವಾರಿಸಲು ಸಾಧ್ಯ ಎಂದು ಅವರು ಹೇಳಿದರು.
ಕಣ್ಣಿನ ಆಸ್ಪತ್ರೆಯ ಆಡಳಿತಾಧಿಕಾರಿ ಶಂಕರ ಶೆಟ್ಟಿ ಮಾತನಾಡಿ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟಬಲ್ ಟ್ರಸ್ಟ್ ಹತ್ತು ವರ್ಷಗಳಿಂದ ಕಣ್ಣಿನ ಚಿಕಿತ್ಸೆಯಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿದೆ. ಅದರದು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದ ನಿಸ್ವಾರ್ಥ ಸೇವೆ ಎಂದು ಹೇಳಿದರು.
ಸಾಧನಾ ಸದಸ್ಯ ನಾಗೇಶ ಎಸ್. ರಾವ್ ಸ್ವಾಗತಿಸಿದರು. ದೇವಿದಾಸ ಶ್ಯಾನುಭಾಗ್ ವಂದಿಸಿದರು. ಕಾರ್ಯದರ್ಶಿ ಗಜೇಂದ್ರ ಖಾರ್ವಿ, ಕೋಶಾಧಿಕಾರಿ ಎಂ. ಸುಬ್ರಹ್ಮಣ್ಯ ಅವಭೃತ ಇದ್ದರು. ಸಾಧನಾ ಸದಸ್ಯರು ಸಹಕರಿಸಿದರು. ಆಸ್ಪತ್ರೆಯ ನೇತ್ರ ತಜ್ಞ ಡಾ. ಅಭಿನಯ್ ಮತ್ತು ತಂಡ ಶಿಬಿರಕ್ಕೆ ಬಂದ 129 ಜನರ ನೇತ್ರ ತಪಾಸಣೆ ನಡೆಸಿ, 31 ಜನರನ್ನು ಕಣ್ಣಿನ ಪೊರೆ ಚಿಕಿತ್ಸೆಗೆ ಆಯ್ಕೆ ಮಾಡಿದರು. 57 ಜನರಿಗೆ ಆಸ್ಪತ್ರೆಗೆ ಬಂದು ಹೆಚ್ಚಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.