ಆರೋಗ್ಯ
ಮರವಂತೆ :ವಯೋವೃದ್ಧರ ಆರೋಗ್ಯ ಸಮಸ್ಯೆಗಳು-ಮಾಹಿತಿ ಶಿಬಿರ ಜುಲೈ 21ಕ್ಕೆ

Views: 87
ಕುಂದಾಪುರ :ಮರವಂತೆಯ ಸೇವಾ ಸಾಂಸ್ಕೃತಿಕ ವೇದಿಕೆ ‘ಸಾಧನಾ’ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಜಂಟಿ ಆಶ್ರಯದಲ್ಲಿ ಜುಲೈ 21ನೇ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ‘ವಯೋವೃದ್ಧರನ್ನು ಕಾಡುವ ಆರೋಗ್ಯ ಸಮಸ್ಯೆಗಳ’ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ನಡೆಯುವುದು.
ಮರವಂತೆ ಸಾಧನಾ ಸಮುದಾಯ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಉಡುಪಿ ಆದರ್ಶ ಆಸ್ಪತ್ರೆಯ ತಜ್ಞ ವೈದ್ಯ ಡಾ. ಕೆ. ಸುದೀಪ್ ಶೆಟ್ಟಿ ಮಾಹಿತಿ ನೀಡುವರು. ಭಾಗವಹಿಸುವವರ ಬಿಪಿ ಮತ್ತು ಶುಗರ್ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುವುದು. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸಲಾಗಿದೆ.