ಇತರೆ

ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು

Views: 0

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ರಾಜೋಳ್ಳಿಯಲ್ಲಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾದ ಘಟನೆ ನಡೆದಿದೆ.

ಕೊಲೆಯಾದ ಮಹಿಳೆ ಅಂಬಮ್ಮ (30) ಮಲಗಿದ್ದ ವೇಳೆ ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿ ಖಾಸಿಮಪ್ಪ (35) ಕೊಲೆ ಮಾಡಿ ಪರಾರಿಯಾಗಿದ್ದ.ಇಂದು ಬೆಳಗ್ಗೆ ಅಡವಿ ಖಾನಾಪುರ ಜಮೀನಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಖಾಸಿಮಪ್ಪನ ಶವ ಪತ್ತೆಯಾಗಿದೆ.

ಮದ್ಯವ್ಯಸನಿಯಾಗಿದ್ದ ಖಾಸಿಮಪ್ಪ ನಿತ್ಯ ಪತ್ನಿ ಜೊತೆ ಜಗಳ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಆರ್. ಭೇಟಿ ನೀಡಿ ಪರಿಶೀಲಿಸಿದ್ದಾರೆ.ಮಾನ್ವಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!