ಇತರೆ

ಮಹಾರಾಷ್ಟ್ರದ ಔಷಧಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ; ಎಂಟು ಮಂದಿ ಸಾವು,

Views: 0

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಎಂಟು ಮಂದಿ ಸಜೀವ ದಹನವಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ರಾಯಗಢದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(ಎನ್‌ಡಿಆರ್‌ಎಫ್) ಅಧಿಕಾರಿ ತಿಳಿಸಿದ್ದಾರೆ.

ಒಟ್ಟು ಎಂಟು ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು. ಇದು ಸ್ಥಳದಲ್ಲಿದ್ದ ರಾಸಾಯನಿಕ ತುಂಬಿದ ಬ್ಯಾರೆಲ್‌ಗಳು ಸ್ಫೋಟಗೊಳ್ಳಲು ಕಾರಣವಾಗಿದೆ ಮತ್ತು ಬೆಂಕಿಯನ್ನು ಮತ್ತಷ್ಟು ತೀವ್ರಗೊಳಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ

Related Articles

Back to top button
error: Content is protected !!