ಇತರೆ

ಮಹಿಳಾ ಅಧಿಕಾರಿಗಳ ಜತೆ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್, ಬಂಧಿತ ಕೃಪಲಾನಿ ಕಾಮಕಾಂಡ ಬಯಲು

Views: 61

ಕನ್ನಡ ಕರಾವಳಿ ಸುದ್ದಿ: ಮಹಿಳಾ ಕಸ್ಟಮ್ಸ್ ಅಧಿಕಾರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಪೊಲೀಸರಿಂದ ಬಂಧಿತನಾಗಿರುವ ಕೃಪಲಾನಿ ಎಂಬಾತನ ವಿಚಾರಣೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ.

ಈತ ಕೇವಲ ಒಬ್ಬರನ್ನಲ್ಲ, ಸುಮಾರು 50ಕ್ಕೂ ಹೆಚ್ಚು ಅಧಿಕಾರಿಗಳನ್ನು ಇದೇ ರೀತಿ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ಮಾಡಿ ನಂತರ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಆ ಮೂಲಕ ತನ್ನ ಕುಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದ ಎಂಬ ಆರೋಪವಿದೆ.

ಜಿಎಸ್‌ಟಿ, ಕಸಮ್ ಮಹಿಳಾ ಅಧಿಕಾರಿಗಳೇ ಟಾರ್ಗೆಟ್: ಆರೋಪಿ ಕೃಪಲಾನಿ ಮುಖ್ಯವಾಗಿ ಜಿಎಸ್‌ಟಿ ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಆರಂಭದಲ್ಲಿ ಕೆಲಸದ ನಿಮಿತ್ತ ಅಧಿಕಾರಿಗಳೊಂದಿಗೆ ಸಲುಗೆ ಬೆಳೆಸುತ್ತಿದ್ದ ಈತ, ಬಳಿಕ ಡಿನ್ನರ್, ಲಂಚ್ ಎಂದು ಆಪ್ತನಾಗುತ್ತಿದ್ದ. ನಂತರ ಪ್ರೀತಿ ಮತ್ತು ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸುತ್ತಿದ್ದ. ಅಷ್ಟಕ್ಕೇ ಸುಮ್ಮನಾಗದೆ, ಆ ದೈಹಿಕ ಸಂಪರ್ಕವನ್ನೇ ಬಂಡವಾಳವಾಗಿಸಿಕೊಂಡು ಅಧಿಕಾರಿಗಳನ್ನು

ಕೆಲಸದ ಲೂಪ್ ಹೋಲ್ ಬಳಸಿ ಬ್ಲ್ಯಾಕ್ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಮೊದಲು ಅಧಿಕಾರಿಗಳ ಕಾರ್ಯವೈಖರಿ ಮತ್ತು ಇಲಾಖೆಯ ಒಳಗಿನ ಲೋಪದೋಷಗಳನ್ನು ತಿಳಿದುಕೊಳ್ಳು ತ್ತಿದ್ದ ಈತ, ಅದನ್ನು ಇಟ್ಟುಕೊಂಡು ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದ. ಮಹಿಳಾ ಅಧಿಕಾರಿಗಳ ಜತೆ ಲೈಂಗಿಕ ಸಂಪರ್ಕದ ನಂತರ ವಿಡಿಯೋ ಅಥವಾ ಫೋಟೋಗಳನ್ನು ಬಳಸಿ ಬೆದರಿಕೆ ಹಾಕುತ್ತಿದ್ದ ಈತ, ಅಧಿಕಾರಿಗಳನ್ನು ತನ್ನ ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದ ಎಂಬ ಆರೋಪವಿದೆ.

Related Articles

Back to top button
error: Content is protected !!