ಇತರೆ

ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು

Views: 14

ಕನ್ನಡ ಕರಾವಳಿ ಸುದ್ದಿ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.

ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಸ್ವಾಮೀಜಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ತಮ್ಮ ಮೇಲೆ ಸ್ವಾಮೀಜಿಯು ಲೈಂಗಿಕ ದೌರ್ಜನ್ಯ ಎಸಗಿದ್ದು, ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಸಂತ್ರಸ್ತ ಮಹಿಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಸ್ವಾಮೀಜಿಯು ಕೂಡ ಮಹಿಳೆ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ.

ಸ್ವಾಮೀಜಿ ವಿರುದ್ಧ ಮಹಿಳೆ ನೀಡಿದ ದೂರಿನಲ್ಲಿ ಏನಿದೆ?

“ಬೆಂಗಳೂರು ನಿವಾಸಿಯಾಗಿರುವ ನಾನು, ಲಿಂಗಾಯತ ಸಮಾಜಕ್ಕೆ ಸೇರಿದವಳಾಗಿದ್ದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಪೀಠಾಧಿಪತಿಗಳು, ಮಹಾಪೀಠ ಕೂಡಲ ಸಂಗಮ, ಇವರ ಭಕ್ತಳಾಗಿದ್ದು, ಬೆಂಗಳೂರಿಗೆ ಬಂದಾಗ ಹಲವು ಬಾರಿ ಭೇಟಿಯಾಗಿ ಮಾತನಾಡಿ ಅವರ ಹೋರಾಟಗಳ ಬಗ್ಗೆ ಬೆಂಬಲವನ್ನು ಸಹ ನೀಡಿದ್ದನು. ಹೀಗೆ ಪರಿಚಯವಾಗಿದ್ದ ಸ್ವಾಮೀಜಿಯವರು ಅವರು ನನ್ನನ್ನು ಮಠಕ್ಕೆ ಕರೆಸಿ ‘ಪ್ರಸಾದ ಕೊಡುತ್ತೇನೆ’ ಎಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ಮಾತನಾಡುತ್ತಾ ಅಸಭ್ಯವಾದ ಪದಗಳನ್ನು ಬಳಸಿ, ಮೈ ಕೈಯನ್ನು ಮುಟ್ಟುತ್ತ ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದ್ದು, ಆ ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ನನ್ನ ಮೇಲೆ ಅವರು ನಡೆಸಿರುವ ಲೈಂಗಿಕ ದೌರ್ಜನ್ಯದ ಖಾಸಗಿ ವಿಡಿಯೋವನ್ನು ಮಾಡಿಕೊಂಡಿದ್ದಾರೆ. ಆ ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದು, ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ’ ಎಂದು ಬೆದರಿಸುತ್ತಿದ್ದಾರೆ. ಈ ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗುತ್ತಿದೆ ” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Related Articles

Back to top button
error: Content is protected !!