ರಾಜಕೀಯ
ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ ಯೋಜನೆ ಚಾಲನೆ

Views: 0
ಬೆಂಗಳೂರು: ಕಾಂಗ್ರೆಸ್ ಪಕ್ಷ ತನ್ಚ ಚುನಾವಣೆಯಲ್ಲಿ ಘೋಷಿಸಿದ ಐದು ಗ್ಯಾರಂಟಿಗಳಲ್ಲಿ ಒಂದಾದ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಸೇವೆ ಒದಗಿಸುವ ಶಕ್ತಿ ಯೋಜನೆ, ಭಾನುವಾರ ಚಾಲನೆ ನೀಡಲಾಯಿತು. ಸಿದ್ದರಾಮಯ್ಯ ಅವರು ಯೋಜನೆಯನ್ನು ಉದ್ಘಾಟಿಸಿ, ಇದೇ ಹೊತ್ತಿಗೆ ಸರಿಯಾಗಿ ಎಲ್ಲಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಯೋಜನೆಗೆ ಚಾಲನೆ ನೀಡಿದರು. ಆರ್ಥಿಕ ಸಂಕಷ್ಟದ ನಡುವೆ ಬದುಕಿನ ಉತ್ಸಾಹ ಕಳೆದುಕೊಳ್ಳದೆ ಸವಾಲುಗಳನ್ನು ಮೆಟ್ಟಿನಿಂತು ಹೋರಾಟದ ಮೂಲಕ ಬದುಕು ಕಟ್ಟಿಕೊಂಡಿರುವ ಕನ್ನಡ ನೆಲದ ಪ್ರತಿ ಮಹಿಳೆಯು ನಮ್ಮ ಈ ಯೋಜನೆಯ ಹಿಂದಿನ ಪ್ರೇರಕ ಶಕ್ತಿ ಎಂದರು.






