ಮಹಿಳೆಯೊಂದಿಗೆ ಸರಸ ಸಲ್ಲಾಪ: ವೈರಲ್ಲಾದ ರಾಸಲೀಲೆ ವಿಡಿಯೋ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಮಹತ್ವದ ಹೇಳಿಕೆಯೇನು?
Views: 395
ಕನ್ನಡ ಕರಾವಳಿ ಸುದ್ದಿ: ಐಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರ ಅವರು ಗೃಹ ಸಚಿವ ಪರಮೇಶ್ವರ್ ಭೇಟಿಗೆ ದೌಡಾಯಿಸಿದ್ದಾರೆ.
ಆದರೆ ಪರಮೇಶ್ವರ್ ಭೇಟಿಗೆ ನಿರಾಕರಿಸಿದ್ದು ರಾಮಚಂದ್ರ ವಾಪಸ್ ಆಗಿದ್ದಾರೆ. ಇನ್ನು ಇದೇ ಡಿಜಿಪಿ ರಾಮಚಂದ್ರ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ.
ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಸಂಪೂರ್ಣವಾಗಿ AI ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೋ ಆಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ಹಚ್ಚಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ರೀತಿಯ ಷಡ್ಯಂತ್ರ ರೂಪಿಸಿವೆ.ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿದ್ದೆ. ಇದರ ಬಗ್ಗೆ ನಾನು ವಕೀಲರ ಜೊತೆಗೆ ಮಾತನಾಡುತ್ತೇನೆ. ಇದರ ಬಗ್ಗೆ ತನಿಖೆ ಆಗಬೇಕು ಎಂದು ಸಮಜಾಯಿಷಿ ನೀಡಿದರು.
ಈ ವಿಡಿಯೋ ಐದಾರು ತಿಂಗಳಿನ ಹಿಂದಿನದು ಎಂದು ತಿಳಿದುಬಂದಿದೆ. ಸರ್ಕಾರ ಇದರ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಈ ಕಾಲದಲ್ಲಿ ಏನು ಬೇಕಾದರೂ ಮಾಡುವ ಸಾಧ್ಯತೆಯಿದೆ. ಇದರ ಬಗ್ಗೆ ವಕೀಲರ ಜೊತೆ ಚರ್ಚಿಸಿ ಮಾತನಾಡುತ್ತೇನೆ ಎಂದು ಡಿಜಿಪಿ ರಾಮಚಂದ್ರರಾವ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ಶಿಸ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಡಿಜಿಪಿ ರಾಮಚಂದ್ರ ರಾವ್ ಅವರ ವಿಡಿಯೋ ವೈರಲ್ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಮಚಂದ್ರ ರಾವ್ ವಿಡಿಯೋ ವಿಷಯ ಕೇಳಿ ಸಿಟ್ಟಿಗೆದ್ದ ಸಿಎಂ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದ್ದಾರೆ.
ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದ್ದಾರೆ. “ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ” ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.






