ಇತರೆ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

Views: 215

ಕನ್ನಡ ಕರಾವಳಿ ಸುದ್ದಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ 85 ವರ್ಷದ ಚೆನ್ನಮ್ಮ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆದರೆ ಇಂದು ಸಂಜೆ 4.30ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954 ಮೇ 25ರಂದು ಹೆಚ್.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ 6 ಜನ ಮಕ್ಕಳಿದ್ದಾರೆ.

Related Articles

Back to top button
error: Content is protected !!