ರಾಜಕೀಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ:ಇಂದು ಶಾಲಾ-ಕಾಲೇಜು, ಬ್ಯಾಂಕ್‌, ಸರ್ಕಾರಿ ಕಚೇರಿಗಳಿಗೆ ರಜೆ

Views: 228

ಕನ್ನಡ ಕರಾವಳಿ ಸುದ್ದಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಗುರುವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇಂದು ಡಿಸೆಂಬರ್ 27 ರಂದು ಸರ್ಕಾರಿ ರಜೆ ಘೋಷಣೆ ಮಾಡಿದ್ದು, ಶಾಲಾ-ಕಾಲೇಜುಗಳು, ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವುದಿಲ್ಲ.

ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.   27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಅವರನ್ನು ಗುರುವಾರ ಸಂಜೆ ದೆಹಲಿಯ ಏಮ್ಸ್‌ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ರಾತ್ರಿಯ ವೇಳೆಗೆ ಅವರು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ. ರಾತ್ರಿ 8.06 ನಿಮಿಷಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ರಾತ್ರಿ 9.51ಕ್ಕೆ ಅವರು ಅಸುನೀಗಿದ್ದಾರೆ

ಇನ್ನು ಕೇಂದ್ರ ಸರ್ಕಾರ ಕೂಡ, ಇಂದು ನಡೆಯಲಿರುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು ಎಂದಿದೆ.7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗುವುದು. ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಡಾ. ಮನಮೋಹನ್ ಸಿಂಗ್ ಅವರಿಗೆ ಸಂಪೂರ್ಣ ರಾಜ್ಯ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದೆ.

 

 

 

Related Articles

Back to top button
error: Content is protected !!