ಧಾರ್ಮಿಕ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕುಟುಂಬದವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ
Views: 0
ಕನ್ನಡ ಕರಾವಳಿ ಸುದ್ದಿ: ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಸೋಮವಾರ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಪತ್ನಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಮೊಮ್ಮಗನ ಜೊತೆ ಕೊಲ್ಲೂರಿಗೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಹಾಗೂ ನವಚಂಡಿಕಾ ಯಾಗವನ್ನು ನೆರೆವೇರಿಸಲಾಗಿದೆ.
ಕುಟುಂಬದ ದೋಷ ಪರಿಹಾರ ಹಾಗೂ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಹರಕೆಗಳನ್ನು ತೀರಿಸುವ ಉದ್ದೇಶದಿಂದಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಿಗ್ಗೆ ಆರು ಗಂಟೆಗೆ ನವಚಂಡಿಕಾ ಯಾಗ ಆರಂಭಿಸಿ ಹತ್ತು ಗಂಟೆಗೆ ಪೂರ್ಣಾಹುತಿ ಮುಗಿದಿದೆ. ಈ ವೇಳೆ ಕುಟುಂಬದ ಸದಸ್ಯರು ಯಾಗದಲ್ಲಿ ಪೂರ್ಣವಾಗಿ ಭಾಗವಹಿಸಿ ದೇವಿ ಮೂಕಾಂಬಿಕೆಯ ಕೃಪೆಗೆ ಪಾತ್ರರಾದರು.






