ರಾಜಕೀಯ

ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್‌ ನಿಧನ

Views: 32

ಕಲಬುರಗಿ, : ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಕಲಬುರಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕರಾದ ಡಾ. ನಾಗರೆಡ್ಡಿ ಪಾಟೀಲ್‌ (79) ಅವರು ಇಂದು ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು

ಹಿರಿಯ ಮುತ್ಸದ್ದಿ , ಶಿಕ್ಷಣ ಪ್ರೇಮಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು. ಇನ್ನೂ ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ನಾಯರಾದ ನಾಗರೆಡ್ಡಿ ಅವರು ಪಕ್ಷ ಕಟ್ಟುವಲ್ಲಿ ತಮ್ಮದೇ ಆದ ಪಾತ್ರ ನಿರ್ವಹಿಸಿದ್ದಾರೆ. ನಾಗರೆಡ್ಡಿ ಅವರ ಪುತ್ರ ಶಿವಶರಣರೆಡ್ಡಿ ಪಾಟೀಲ್‌ ಸದ್ಯ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ನಾಗರೆಡ್ಡಿ ಅವರು ಸಹೋದರ ಮತ್ತು ಸಹೋದರಿಯರು, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಇಂದು ಮಧ್ಯಾನ್ಹ 3.30ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

Back to top button
error: Content is protected !!