ರಾಜಕೀಯ

ಮಾಜಿ ಶಾಸಕ ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು

Views: 155

ಉಡುಪಿ:  ವಿದಾನ ಪರಿಷತ್  ಟಿಕೆಟ್ ವಂಚಿತ   ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಉಡುಪಿ  ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್‌.ಎಲ್‌. ಭೋಜೇಗೌಡ ಸ್ಪರ್ಧಿಸಿದ್ದಾರೆ.

ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ.ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ  ಶಿಸ್ತು ಕ್ರಮಕ್ಕೆ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ

 

Related Articles

Back to top button
error: Content is protected !!