ರಾಜಕೀಯ

ಮಾಜಿ ಸಚಿವ ಕಾಗೋಡು ತಿಮ್ಮಪ್ಪ  ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

Views: 39

ಶಿವಮೊಗ್ಗ: ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರ ಕಾಣಿಕೊಂಡ ಹಿನ್ನೆಲೆ ಆರೋಗ್ಯದಲ್ಲಿ ಏರುಪೇರು ಆಗಿದೆ. ಜ್ವರ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ವರದಿಗಳ ಪ್ರಕಾರ ತೀವ್ರ ಜ್ವರ ಮತ್ತು ಸುಸ್ತಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಹಿನ್ನೆಲೆಯಲ್ಲಿ ಅವರ ಪುತ್ರಿ ಡಾ.ರಾಜನಂದಿನಿ ಶಿವಮೊಗ್ಗಕ್ಕೆ ಕರೆದುಕೊಂಡು ಬಂದಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. 93 ವರ್ಷದ ಕಾಗೋಡು ತಿಮ್ಮಪ್ಪ ಅವರು ಈ ಹಿಂದೆ ವಿಧಾನಸಭಾ ಅಧ್ಯಕರು, ಕಂದಾಯ, ಆರೋಗ್ಯ, ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

Related Articles

Back to top button
error: Content is protected !!