ಆರೋಗ್ಯ

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ “ದಯಾಮರಣ ಹಕ್ಕು” ನೀಡಿ ರಾಜ್ಯ ಸರ್ಕಾರ ಆದೇಶ

Views: 125

ಕನ್ನಡ ಕರಾವಳಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು (Right to die with dignity) ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ.

ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸುಪ್ರೀಂ ಕೋರ್ಟ್ನ ನಿರ್ದೇಶನದ ಅನ್ವಯ ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ.

ಇದೀಗ ಮಾರಣಾಂತಿಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್ ನಿರ್ದೇಶನ ಜಾರಿ ಮಾಡಿದಂತಾಗಿದೆ.

Related Articles

Back to top button