ಜನಮನ

ಮಾರ್ಚ್ 22ಕ್ಕೆ ಕರ್ನಾಟಕ ಬಂದ್!

Views: 139

ಕನ್ನಡ ಕರಾವಳಿ ಸುದ್ದಿ: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಈ ಕುರಿತು ಮಂಗಳವಾರ ಬೆಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಕನ್ನಡಪರ ಸಂಘಟನೆಗಳ ನಾಯಕರೊಂದಿಗೆ ಸಭೆಯನ್ನು ವಾಟಾಳ್ ನಾಗರಾಜ್ ನಡೆಸಿದರು. ಬಳಿಕ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಬೆಳಗಾವಿಯಲ್ಲಿನ ಮರಾಠಿಗರ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗೆ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ದಿನಾಂಕ 22-03-2025ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಬಂದ್ ವೇಳೆ ಏನಿರಲ್ಲ?

ಬಂದ್ ವೇಳೆಯಲ್ಲಿ ಹೋಟೆಲ್ ಕ್ಲೋಸ್

ಸಿನಿಮಾ ಥಿಯೇಟರ್ ಬಂದ್

ಸರ್ಕಾರಿ ಕಚೇರಿಗಳು ತೆರೆದಿರುವುದು ಅನುಮಾನ

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸೋ ಸಾಧ್ಯತೆ

ಸಾರಿಗೆ ಬಸ್ ಸಂಚಾರ ಇರಲ್ಲ.

ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತ.

ಮಾಲ್‌ಗಳು ಕ್ಲೋಸ್

ಬಂದ್ ವೇಳೆ ಏನಿರುತ್ತೆ?

ಮೆಡಿಕಲ್ ಶಾಪ್ ಓಪನ್

ಹಾಲಿನ ಬೂತ್ ಗಳು ತೆರೆದಿರುತ್ತೆ

ಹಣ್ಣು-ತರಕಾರಿ ಅಂಗಡಿ ಓಪನ್

ಅಗತ್ಯ ವಸ್ತುಗಳ ಪೂರೈಕೆ ಸೇವೆ ಎಂದಿನಂತೆ ಇರಲಿದೆ

ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಆಗೋದು ಕಡಿಮೆ

Related Articles

Back to top button