ಜನಮನ
ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ
Views: 14
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು ಪಡೆದುಕೊಂಡಿದೆ. ಮುಂದಿನ ಎರಡು ದಿನ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ ಆಗಸ್ಟ್ 24ರ ವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆ, ಮಿಂಚು, ಬಿರುಗಾಳಿ ಮತ್ತು ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆ ಕರಾವಳಿ ಕರ್ನಾಟಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಈ ವೇಳೆ ಗಂಟೆಗೆ ಸುಮಾರು 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಮುಂದಿನ ಎರಡು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿ ಬೀಸಲಿರುವ ಕಾರಣ ಅಗತ್ಯವಿದ್ದರೆ ಮಾತ್ರ ಜನರು ಮನೆಯಿಂದ ಹೊರ ಹೋಗುವಂತೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.






