ಮುಂದಿನ ಒಂದು ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಮುನ್ಸೂಚನೆ
Views: 89
ಕನ್ನಡ ಕರಾವಳಿ ಸುದ್ದಿ: ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ವಲಯಗಳಲ್ಲಿ ಇನ್ನೊಂದು ವಾರದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ತಾಪಮಾನ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ತಾಪಮಾನ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯ ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಉತ್ತರ ಶ್ರೀಲಂಕಾದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ಎತ್ತರದಲ್ಲಿ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇರುತ್ತದೆ.
ರಾಜ್ಯದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗುತ್ತಿದೆ. ಇನ್ನೂ ಒಂದು ವಾರದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಉಳಿದಂತೆ ತಾಪಮಾನದಲ್ಲಿ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.






