ಜನಮನ

ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Views: 13

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಭಾನುವಾರ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.17ರಿಂದ 23ವರೆಗೆ ಭಾರಿ ಮಳೆ ಬೀಳಲಿದೆ. ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆ.19ರಿಂದ ನಾಲ್ಕೈದು ದಿನ ತುಂತುರು ಮಳೆ ನಿರೀಕ್ಷೆ ಇದೆ.

ಬೆಂಗಳೂರು ನಗರದಲ್ಲಿ ಮುಂದಿನ 5 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಈ ವೇಳೆ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದ ಮಳೆ ಸುರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿ.ಸೆ. ಮತ್ತು 21 ಡಿ.ಸೆ. ದಾಖಲಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.

Related Articles

Back to top button
error: Content is protected !!