ಶಿಕ್ಷಣ
ಮುಂದುವರಿದ ಭಾರೀ ಮಳೆ, ನಾಳೆ ಜು.19 ರಂದು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Views: 267
ಉಡುಪಿ :ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ನಾಳೆ ದಿನಾಂಕ 19.07.2024ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆ ,ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.