ರಾಜಕೀಯ
ಮುಜರಾಯಿ ಇಲಾಖೆಯ ಒಂದು ದೇವಸ್ಥಾನದ ಹುಂಡಿ ಹಣ ಮತ್ತೊಂದು ದೇವಸ್ಥಾನಕ್ಕೆ ಬಳಸದೇ ಅದೇ ದೇಗುಲಕ್ಕೆ ಬಳಕೆಯಾಗಬೇಕು: ಮುಜರಾಯಿ ಸಚಿವ

Views: 53
ಮುಜರಾಯಿ ಇಲಾಖೆ ಅಡಿಯಲ್ಲಿ 34 ಸಾವಿರ ದೇವಸ್ಥಾನಗಳಿವೆ. ಈ ದೇವಸ್ಥಾನಗಳ ಹುಂಡಿಗೆ ಸಾಕಷ್ಟು ಹಣ ಬರುತ್ತಿದೆ. ಒಂದು ದೇವಸ್ಥಾನದ ಹಣ ಮತ್ತೊಂದು ದೇವಸ್ಥಾನಕ್ಕೆ ಬಳಸುವುದಿಲ್ಲ. ಆಯಾ ದೇವಸ್ಥಾನದ ಹುಂಡಿ ಹಣ ಅದೇ ದೇವಸ್ಥಾನಕ್ಕೆ ಸೇರುತ್ತದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಧಾರವಾಡ, ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇವಸ್ಥಾನಕ್ಕೆನೇ ಬಳಸಬೇಕು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಬರುವ ಜನರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಮುಜರಾಯಿ ಇಲಾಖೆಗೆ ಆದಾಯ ಹೆಚ್ಚಿಗೆ ಬರುತ್ತಿದೆ ಎಂಬ ಪ್ರಶ್ನೆ ಬರುವುದಿಲ್ಲ. ಮುಜರಾಯಿ ಇಲಾಖೆ ಅಡಿಯಲ್ಲಿ 34 ಸಾವಿರ ದೇವಸ್ಥಾನಗಳಿವೆ. ದೇವಸ್ಥಾನಗಳ ಹುಂಡಿಗೆ ಸಾಕಷ್ಟು ಹಣ ಬರುತ್ತಿದೆ. ಒಂದು ದೇವಸ್ಥಾನದ ಹಣ ಮತ್ತೊಂದು ದೇವಸ್ಥಾನಕ್ಕೆ ಬಳಸುವುದಿಲ್ಲ. ಆಯಾ ದೇವಸ್ಥಾನದ ಹುಂಡಿ ಹಣ ಅದೇ ದೇವಸ್ಥಾನಕ್ಕೆ ಸೇರುತ್ತದೆ.






