ಮುಡಾ ಪ್ರಕರಣ: ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿದ್ದ ಸಿಎಂ ಅರ್ಜಿ ವಜಾ

Views: 63
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಆದೇಶ ಹೊರಬಿದ್ದಿದೆ.
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರು, ಕಾನೂನು ಸಲಹೆಗಾರರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸುತ್ತಿದ್ದಾರೆ. ಕಾವೇರಿ ನಿವಾಸದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಡಿ.ಸುಧಾಕರ್, ಎಂ.ಸಿ.ಸುಧಾಕರ್, ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದಾರೆ
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ತುರ್ತು ಮಾಧ್ಯಮಗೋಷ್ಟಿ ಕರೆದಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿಯಮ ಬಾಹಿರವಾಗಿ ನಿವೇಶನಗಳನ್ನು ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ
ವಿಚಾರಣೆ ವೇಳೆ ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಪ್ರೊ. ರವಿವರ್ಮಕುಮಾರ್ ಸುದೀರ್ಘ ವಾದ ಮಂಡಿಸಿದ್ದರು. ರಾಜ್ಯಪಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರರ ಪರವಾಗಿ ಹಿರಿಯ ವಕೀಲರಾದ ಕೆ.ಜಿ. ರಾಘವನ್ ಮತ್ತಿತರ ವಕೀಲರು ವಾದ ಮಂಡಿಸಿದ್ದರು






