ರಾಜಕೀಯ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಆಗಸ್ಟ್ 19ರಂದು ಮೈಸೂರು ಬಂದ್‌ಗೆ ಕರೆ

Views: 94

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿ ಆಗಸ್ಟ್ 19 ಮೈಸೂರು ಬಂದ್ ಆಚರಿಸಲು ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಪ್ರಗತಿಪರ ಸಂಘಟನೆ, ಸಿದ್ದರಾಮಯ್ಯ ಅಭಿಮಾನಿಗಳು ಕರೆ ನೀಡಿದ್ದಾರೆ.

ಶನಿವಾರ ಮೈಸೂರಿನ ಜಲದರ್ಶಿನಿಯಲ್ಲಿ ಸಭೆ ನಡೆಸಿದ ಪ್ರಗತಿಪರ ಸಂಘಟನೆ, ಸಿದ್ದರಾಮಯ್ಯ ಅಭಿಮಾನಿಗಳು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯು ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡಿದೆ. ಮುಡಾ ಹಗರಣದಲ್ಲಿ ನೇರ ಆರೋಪಿಯಲ್ಲದ ಸಿಎಂ ಸಿದ್ದರಾಮಯ್ಯ ಅವರನ್ನು ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿ ಅವರ ರಾಜಕೀಯ ಜೀವನವನ್ನು ಮುಗಿಸಲು ಹೊರಟಿದ್ದು ಇದನ್ನು ಖಂಡಿಸಿ ಆಗಸ್ಟ್ 19 ರಂದು ಮೈಸೂರು ಬಂದ್‌ ಮಾಡಲು ನಿರ್ಧರಿಸಲಾಗಿದೆ ಎಂದರು.

ಕಾಂಗ್ರೆಸ್ ಕಾರ್ಯಕರ್ತರು ಇಂದು ಟೈರ್ ಸುಟ್ಟು ಪ್ರತಿಭಟನೆ ನಡೆಸಿದರು. ನ್ಯಾಯಾಲಯದ ಮುಂಭಾಗದಲ್ಲಿ ಸೇರಿದ ಮುಖಂಡರು ರಾಜ್ಯಪಾಲರ ನಡೆಯನ್ನು ಖಂಡಿಸಿ ಘೋಷಣೆ ಕೂಗಿದರು. ಬಳಿಕ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಪಾಲರ ಭಾವಚಿತ್ರ ಸುಟ್ಟು ವಿರೋಧ ವ್ಯಕ್ತಪಡಿಸಿದರು. ಕೂಡಲೇ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನೀಡಿರುವುದನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

 

Related Articles

Back to top button
error: Content is protected !!