ಕರಾವಳಿ

ಮುರುಡೇಶ್ವರ ನಾಲ್ವರು ವಿದ್ಯಾರ್ಥಿಗಳ ಸಾವಿಗೆ ಶಿಕ್ಷಕರ ನಿರ್ಲಕ್ಷ್ಯ ಆರೋಪ: ಮುಖ್ಯಶಿಕ್ಷಕಿ ಸೇರಿ 7 ಶಿಕ್ಷಕರು ಪೊಲೀಸ್ ವಶಕ್ಕೆ

Views: 261

ಕನ್ನಡ ಕರಾವಳಿ ಸುದ್ದಿ: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರು ಮುರುಡೇಶ್ವರದ ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಖ್ಯ ಶಿಕ್ಷಕಿ ಸೇರಿ 7 ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ವೇಳೆ ಡಿ.10ರಂದು ಸಮುದ್ರದ ಬಳಿ ಆಟವಾಡುವಾಗ ಅಲೆಗಳಿಗೆ ಸಿಲುಕಿ 7 ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿತ್ತು. ಈ ವೇಳೆ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವವಾಗಿ ಪತ್ತೆಯಾಗಿದ್ದಾಳು. ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಡಿ.11ರಂದು ಬೆಳಿಗ್ಗೆ ಅವರೂ ಕೂಡ ಶವವಾಗಿ ಪತ್ತೆಯಾಗಿದ್ದರು.

ಶಿಕ್ಷಕರ ನಿರ್ಲಕ್ಷ್ಯವೇ ವಿದ್ಯಾರ್ಥಿನಿಯರ ದುರಂತ ಸಾವಿಗೆ ಕಾರಣ ಎಂಬ ಬಗ್ಗೆ ಪ್ರಕರಣ ದಾಖಲಾಗಿದ್ದು, ಇದೀಗ ಶಾಲೆಯ ಮುಖ್ಯಶಿಕ್ಷಕಿ ಸೇರಿ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

Related Articles

Back to top button
error: Content is protected !!