ಜನಮನ
ಮೂರು ವಾರದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ !

Views: 0
ಇತ್ತೀಚಿನ ದಿನಗಳಲ್ಲಿ ಹಣಕ್ಕಾಗಿ ಜನ ಏನು ಮಾಡಲು ತಯಾರು ಇರುತ್ತಾರೆ. ಅಂತೆಯೇ ಇಲ್ಲೊಬ್ಬ ನಿರ್ದಯಿ ತಾಯಿ ತನ್ನ ಮೂರು ವಾರದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ.
ಮಹಿಳೆಯನ್ನು ರೂಪಾಲಿ ದೊಂಡಲ್ ಎಂದು ಗುರುತಿಸಲಾಗಿದೆ. ಈಕೆ ಇನ್ನೊಬ್ಬ ಮಹಿಳೆಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಿಕೊಂಡಿದ್ದಾಳೆ. ಈ ವಿಚಾರವಾಗಿ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದರಿಂದ ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ. ಆಕೆಯನ್ನು ಬಂಧಿಸಿದಾಗ ತಾಯಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.






