ಶಿಕ್ಷಣ

ಮೂವರು ಶಿಕ್ಷಕರಿಂದಲೇ ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Views: 291

ಕನ್ನಡ ಕರಾವಳಿ ಸುದ್ದಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.

ಸದ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಮೂವರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ.

ಸಂತ್ರಸ್ತ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ, ಆಕೆಯ ತಾಯಿ ಈ ವಿಷಯವನ್ನು ಬಹಿರಂಗಗೊಳಿಸಿದ್ದಾರೆ. ತಕ್ಷಣವೇ ಮುಖ್ಯೋಪಾಧ್ಯಾಯರು ತಕ್ಷಣವೇ ಪೊಲೀಸ್ ದೂರು ದಾಖಲಿಸಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಕೃಷ್ಣಗಿರಿಯ ಮಹಿಳಾ ಪೊಲೀಸ್ ತಂಡ ಮೂವರು ಆರೋಪಿ ಶಿಕ್ಷಕರನ್ನು ಬಂಧಿಸಿದ್ದು, ಅವರು ಈಗ 15 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

 

Related Articles

Back to top button