ಇತರೆ

ಮೃತದೇಹ ಸಾಗಿಸುತ್ತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ:7 ಜನರು ದುರ್ಮರಣ,14 ಜನರು ಗಂಭೀರ 

Views: 0

ಕನ್ನಡ ಕರಾವಳಿ ಸುದ್ದಿ: ಮೃತದೇಹ ಸಾಗಿಸುತ್ತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿಯಾಗಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 7 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದಲ್ಲಿ 7 ಜನರು ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹಜಾರಿಬಾಗ್ ಹಾಗೂ ಬರ್ಹಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯ ದನುವಾ ಕಣಿವೆಯಲ್ಲಿ ಈ ಅಪಘಾತ ಸಂಭವಿಸಿದೆ. ಜಾರ್ಖಂಡ್ ನ ಗಿರಿದೀಪ್ ಜಿಲ್ಲೆಯ ಬಗೋದರ್-ಅಟ್ಕಾದಿಂದ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ವ್ಯಾನ್ ನಿಲ್ಲಿಸಿದ್ದಾಗ ಹಿಂದಿನಿಂದ ಬಂದ ಟ್ರಕ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ವ್ಯಾನ್ ಪಲ್ಟಿಯಾಗಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!