ಯುವಜನ

ಮೆದುಳು ಜ್ವರದಿಂದ ಜೀವನ್ಮರಣ ಸ್ಥಿತಿಯಲ್ಲಿದ್ದ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂಧಿಸದೆ ಸಾವು 

Views: 0

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದ ಅಶ್ವಿನಿ ಮತ್ತು ಶ್ರೀನಿವಾಸ ಶೆಟ್ಟಿಗಾರ ಇವರ ಪುತ್ರ ಮೆದುಳು ಜ್ವರದಿಂದ ಜೀವನ ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಜ್ವಲ್ ಶೆಟ್ಟಿಗಾರ್ ಇಂದು ಸೆಪ್ಟಂಬರ್ 17ರಂದು ನಿಧನರಾದರು. 

ತುಮಕೂರು ಸಿದ್ದಗಂಗಾ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ಪ್ರತಿಭಾನ್ವಿತ ವಿದ್ಯಾರ್ಥಿ ಪ್ರಜ್ವಲ್ ಶೆಟ್ಟಿಗಾರ್ ಮೆದುಳು ಜ್ವರದಿಂದ ಕೋಟೇಶ್ವರ ಎನ್ ಆರ್ ಆಚಾರ್ಯ ಆಸ್ಪತ್ರೆಗೆ ಸೇರಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ 26 ದಿನಗಳ ಕಾಲ ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಸಾವನ್ನಪ್ಪಿದ್ದಾರೆ.

Related Articles

Back to top button
error: Content is protected !!