ಇತರೆ

ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿ  ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ 

Views: 39

ಕನ್ನಡ ಕರಾವಳಿ ಸುದ್ದಿ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿಯೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಕೆಲಸ ಸಮರ್ಪಕವಾಗಿ ನಿರ್ವಹಿಸಿದರೂ ವಿನಾಕಾರಣ ಮೇಲಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ನನಗೆ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕುರಹಟ್ಟಿ ಎಂಬುವವರು ರಾಷ್ಟ್ರಪತಿಗೆ ಪತ್ರ ಪತ್ರ ಬರೆದಿದ್ದಾರೆ.

ತನ್ನ ವೇತನವನ್ನೂ ತಡೆಹಿಡಿಯಲಾಗಿದೆ. ಜೀವನೋಪಾಯ ನಿರ್ವಹಣೆ ಕಷ್ಟವಾದ ಕಾರಣ ತನಗೆ ದಯಾಮರಣ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಂದಾಯ ಇಲಾಖೆಯಲ್ಲಿ ಸಮರ್ಪಕವಾಗಿ ನಿರ್ವಹಿಸಿದರೂ ಕಿರುಕುಳ ನೀಡುತ್ತಿದ್ದಾರೆ. ವಿನಾಕಾರಣ ಮೇಲಿಂದ ಮೇಲೆ ನೋಟಿಸ್ ನೀಡಿರುವುದಲ್ಲದೆ, ಕಳೆದ 2 ತಿಂಗಳಿಂದ ವೇತನ ತಡೆಹಿಡಿಯಲಾಗಿದೆ. ನನಗೆ ಅನಾರೋಗ್ಯ ಪೀಡಿತ ತಾಯಿ ಇದ್ದಾರೆ, ಜತೆಗೆ ನಾನು ಕೂಡ ಅನಾರೋಗ್ಯ ಪೀಡಿತನಾಗಿರುವುದರಿಂದ ಜೀವನ ಕಷ್ಟವಾಗಿದೆ ಎಂಬುದು ಯೋಗೇಶ್ ಅಳಲಾಗಿದೆ.

ರಾಷ್ಟ್ರಪತಿಗೆ ಬರೆದ ದಯಾಮರಣ ಪತ್ರದಲ್ಲೇನಿದೆ?

ಪೂರ್ಣಶ್ರಮದಿಂದ ಕೆಲಸ ಮಾಡಿದರೂ ಸರಿಯಾಗಿ ಸಂಬಳ ಸಿಗುತ್ತಿಲ್ಲ. ತನಗೆ ವೃದ್ಧ ತಾಯಿ ಇದ್ದು, ಅವರನ್ನು ಪೋಷಿಸುವ ಜವಾಬ್ದಾರಿಯೂ ನನ್ನ ಮೇಲಿದೆ. ಸರ್ಕಾರದ ಕೆಲಸದಲ್ಲಿದ್ದರೂ, ನನಗೆ ಸರಿಯಾಗಿ ಸಂಬಳ ದೊರಕದೆ ಬಹಳ ಕಷ್ಟ ಅನುಭವಿಸುತ್ತಿದ್ದೇನೆ. ಈ ಪರಿಸ್ಥಿತಿಯಿಂದ ಜೀವನ ಸಾಗಿಸುವುದು ಅತೀವ ಕಠಿಣವಾಗಿದ್ದು, ಮಾನಸಿಕವಾಗಿ ಮತ್ತು ದೈಹಿಕವಾಗಿ ತುಂಬಾ ಸಂಕಟ ಅನುಭವಿಸುತ್ತಿದ್ದೇನೆ. ಆದ್ದರಿಂದ ದಯವಿಟ್ಟು ನನಗೆ ದಯಾಮರಣ ನೀಡುವ ಮೂಲಕ ಈ ದುಃಸ್ಥಿತಿಯಿಂದ ಮುಕ್ತಿಗೊಳಿಸಬೇಕೆಂದು ಕೋರುವುದಾಗಿ ಯೋಗೇಶ್ ಪ್ರತದಲ್ಲಿ ರಾಷ್ಟ್ರಪತಿಗಳಿಗೆ ತಿಳಿಸಿದ್ದಾರೆ.

Related Articles

Back to top button
error: Content is protected !!