ರಾಜಕೀಯ
ಮೈಸೂರಿನಲ್ಲಿ ಅ.30 ರಂದು ಗ್ರಹಲಕ್ಷ್ಮೀ ಯೋಜನೆಗೆ ಚಾಲನೆ ಅಂದೇ ಮಹಿಳೆಯರ ಖಾತೆಗೆ 2,000 ರೂಪಾಯಿ

Views: 0
ಕಾಂಗ್ರೆಸ್ ಸರ್ಕಾರದ ಮೂರು ಗ್ಯಾರಂಟಿಗಳು ಜಾರಿಗೆ ತಂದಿದ್ದು, ಮಹತ್ವಕಾಂಕ್ಷೆಯ ಗ್ರಹಲಕ್ಷ್ಮೀ ಯೋಜನೆಗೆ ದಿನಗಣನೆ ಆರಂಭವಾಗಿದೆ. ಅಗಸ್ಟ್ 30 ರಂದು ಗ್ರಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದ್ದು ಅಂದೇ ಮಹಿಳೆಯರ ಖಾತೆಗೆ 2,000 ರೂಪಾಯಿ ಹಣ ಹಾಕಲಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
ಈ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.






