ಕೃಷಿ

ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್… ಬೆಲೆ ಭಾರೀ ಇಳಿಕೆ 

Views: 58

ಕನ್ನಡ ಕರಾವಳಿ ಸುದ್ದಿ: ಕರ್ನಾಟಕದಲ್ಲಿ ಕಳೆದ ಕೆಲವು ವಾರಗಳಿಂದ ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ರೂ. 7.06 ಇದ್ದು ಒಂದು ಮೊಟ್ಟೆಯ ಬೆಲೆ ಇದೀಗ ರೂ.4.60ಕ್ಕೆ ಇಳಿಕೆಯಾಗಿದ್ದು ಇದು ಗ್ರಾಹಕರಲ್ಲಿ ಸಂತಸ ಮೂಡಿಸಿದ್ದರೆ,

ರಫ್ತು ವ್ಯತ್ಯಯ, ಹಬ್ಬದ ಕಾಲದ ಬೇಡಿಕೆ ಕುಸಿತ ಹಾಗೂ ಬೇಸಿಗೆ ಪರಿಣಾಮ ಮೊಟ್ಟೆ ಬೆಲೆ ಇಳಿಕೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಸುಮಾರು 15 ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮೊಟ್ಟೆ ದರದಲ್ಲಿ ದೊಡ್ಡ ಮಟ್ಟದ ಇಳಿಕೆ ಕಂಡುಬಂದಿದೆ ಎಂದು ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (ಎನ್‌ಇಸಿಸಿ) ತಿಳಿಸಿದೆ.

ರಾಜ್ಯದವಲ್ಲಿ ಪ್ರತಿದಿನ ಸುಮಾರು 2.2 ಕೋಟಿ ಮೊಟ್ಟೆಗಳು ಉತ್ಪಾದನೆಯಾಗುತ್ತವೆ. ಈ ಮೊಟ್ಟೆಗಳ ಒಂದು ಭಾಗವನ್ನು ತಮಿಳುನಾಡಿನ ನಾಮಕ್ಕಲ್ ಕೇಂದ್ರಕ್ಕೆ ಕಳುಹಿಸಿ ಅಲ್ಲಿಂದ ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಸಾಮಾನ್ಯವಾಗಿ ನಾಮಕ್ಕಲ್ ನಿಂದ ದಿನಕ್ಕೆ ಸುಮಾರು 70 ಲಕ್ಷದಿಂದ 1 ಕೋಟಿ ಮೊಟ್ಟೆಗಳು ಗಲ್ಫ್ ದೇಶಗಳಿಗೆ ಸಾಗುತ್ತವೆ.

ಆದರೆ, ಯುದ್ಧ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆಗಳ ಸಂಗ್ರಹ ಹೆಚ್ಚಾಗಿದೆ ಎನ್ನಲಾಗಿದ್ದು, ಇದೂ ಕೂಡ ಬೆಲೆ ಕುಸಿತಕ್ಕೆ ಕಾರಣವಾಗಿದೆ.

ಬೆಲೆ ಕುಸಿತಕ್ಕೆ ಮತ್ತೊಂದು ಕಾರಣ ಹಬ್ಬದ ಸೀಸನ್. ರಂಜಾನ್ ಅವಧಿಯಲ್ಲಿ ಕೆಲ ಸಮುದಾಯಗಳಲ್ಲಿ ಮೊಟ್ಟೆ ಬಳಕೆ ಕಡಿಮೆಯಾಗುತ್ತದೆ. ಜೊತೆಗೆ ಈಸ್ಟರ್ ಕಾಲ ಮತ್ತು ಬೇಸಿಗೆ ಆರಂಭವಾಗಿರುವುದರಿಂದ ಸಹ ಸಾಮಾನ್ಯವಾಗಿ ಮೊಟ್ಟೆ ಬೇಡಿಕೆ ಇಳಿಕೆಯಾಗುತ್ತದೆ.

ಆದರೆ, ಬೆಲೆ ಇಳಿಕೆಯಾಗಿದ್ದರೂ ಮೊಟ್ಟೆ ಉತ್ಪಾದನೆ ಮತ್ರ ನಿಂತಿಲ್ಲ. ಪರಿಣಾಮವಾಗಿ ಹೆಚ್ಚುವರಿ ಮೊಟ್ಟೆಗಳನ್ನು ಶೀತಗೃಹಗಳಲ್ಲಿ ಸಂಗ್ರಹಿಸಲಾಗುತ್ತಿದೆ. ಶೀತಗೃಹಗಳಲ್ಲಿ ಮೊಟ್ಟೆಗಳನ್ನು ಸುಮಾರು ಮೂರು ತಿಂಗಳುಗಳವರೆಗೆ ಸಂರಕ್ಷಿಸಬಹುದು.

ಈ ನಡುವೆ ಮೊಟ್ಟೆ ಬೆಲೆ ಕುಸಿತದಿಂದ ಕೋಳಿ ಸಾಕಾಣಿಕೆದಾರರಿಗೆ ನಷ್ಟದ ಭೀತಿ ಹೆಚ್ಚಾಗಿದೆ. ಆಹಾರ ವೆಚ್ಚ, ಸಾರಿಗೆ ಮತ್ತು ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಸಮಯದಲ್ಲಿ ದರ ಇಳಿಕೆಯಾಗಿರುವುದು ಉತ್ಪಾದಕರಿಗೆ ದೊಡ್ಡ ಸವಾಲಾಗಿದೆ.

Related Articles

Back to top button
error: Content is protected !!