ರಾಜಕೀಯ
ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ ತ್ಯಜಿಸಲು ಮುಂದಾದ ಸುರೇಶ್ ಗೋಪಿ

Views: 290
ನವದೆಹಲಿ: ಮೋದಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರದ ಬೆನ್ನಲ್ಲೇ ಕೇರಳದ ತ್ರಿಶೂರ್ ಸಂಸದ ಸುರೇಶ್ ಗೋಪಿ ಮಂತ್ರಿ ಸ್ಥಾನ ತ್ಯಜಿಸಲು ಮುಂದಾಗಿದ್ದಾರೆ.
ಕೇರಳದಲ್ಲಿ ಬಿಜೆಪಿ ಮೊದಲ ಬಾರಿಗೆ ಮಲೆಯಾಳಿ ನಟರೂ ಆಗಿರುವ ಸುರೇಶ್ ಗೋಪಿ ಮೂಳ ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆದಿದೆ.
ಇದೇ ಕಾರಣಕ್ಕೆ ಸುರೇಶ್ ಗೋಪಿ ಅವರಿಗೆ ರಾಜ್ಯ ಖಾತೆ ಸಚಿವ ಸ್ಥಾನ ನೀಡಲಾಗಿತ್ತು ನನಗೆ ಈ ಹುದ್ದೆ ಬೇಡ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ.ಅವರ ಹೇಳಿಕೆಗೆ ಕಾರಣ ತಿಳಿದುಬಂದಿಲ್ಲ.
ನಟ ಮತ್ತು ರಾಜಕಾರಣಿ ಸುರೇಶ್ ಗೋಪಿ ಅವರು ಚಲನಚಿತ್ರಗಳಿಗೆ ಸಹಿ ಹಾಕಿದ್ದಾರೆ ಮತ್ತು ಅವುಗಳನ್ನು ಯಾವುದೇ ವೆಚ್ಚದಲ್ಲಿ ಮಾಡಬೇಕು ಎಂದು ಹೇಳಿದ್ದಾರೆ.
ಸಂಸದನಾಗಿ ಕೆಲಸ ಮಾಡುವುದೇ ನನ್ನ ಗುರಿ, ನಾನು ಏನನ್ನೂ ಕೇಳಿಲ್ಲ, ನನಗೆ ಈ ಹುದ್ದೆ ಬೇಕಾಗಿಲ್ಲ ಎಂದು ಹೇಳಿದ್ದೆ, ಶೀಘ್ರದಲ್ಲೇ ಹುದ್ದೆಯಿಂದ ಮುಕ್ತಿ ಸಿಗಲಿದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.






