ರಾಜಕೀಯ

ಮೋದಿ ಸಚಿವ ಸಂಪುಟದಲ್ಲಿ ಕರ್ನಾಟಕದ ಐವರು ಸಚಿವರಾಗಿ ಪ್ರಮಾಣವಚನ 

Views: 208

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ರಾಜ್ಯದ ಐವರು ಸಂಸದರಿಗೆ ಅವಕಾಶ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಾಲ್ವರು ಸಂಸದರು ಹಾಗೂ ಓರ್ವ ರಾಜ್ಯಸಭಾ ಸದಸ್ಯರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕರ್ನಾಟಕದಿಂದ ಐವರು ಸೇರಿದಂತೆ 60ಕ್ಕೂ ಹೆಚ್ಚು ಸಂಸದರು ಸಚಿವರಾಗಿ ಪದಗ್ರಹಣ ಮಾಡಿದರು.

ರಾಜ್ಯದಿಂದ  ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಮತ್ತು ಕರ್ನಾಟಕದಿಂದ ರಾಜ್ಯಸಭೆ ಸದಸ್ಯೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಪ್ರಮಾಣವಚನ ಸ್ವೀಕರಿಸಿದರು.

 

 

Related Articles

Back to top button
error: Content is protected !!