ಸಾಂಸ್ಕೃತಿಕ

ಯಕ್ಷಗಾನ ಕಲಾವಿದರ ಸಲಿಂಗಕಾಮ ವಿವಾದಾತ್ಮಕ ಹೇಳಿಕೆ:ಪುರುಷೋತ್ತಮ ಬಿಳಿಮಲೆ ಕ್ಷಮೆಯಾಚನೆ

Views: 145

ಕನ್ನಡ ಕರಾವಳಿ ಸುದ್ದಿ:ಯಕ್ಷಗಾನ ಕಲಾವಿದರಲ್ಲಿ ಬಹುತೇಕರಲ್ಲಿ ಸಲಿಂಗಕಾಮ ಪ್ರವೃತ್ತಿ ಬೆಳೆಯುತ್ತಿತ್ತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ವ್ಯಾಪಕ ಪ್ರತಿರೋಧ ವ್ಯಕ್ತವಾದ ಬಳಿಕ ಕ್ಷಮೆಯಾಚನೆ ಮಾಡಿದ್ದಾರೆ.

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು. ಯಕ್ಷಗಾನ ಕಲಾವಿದರೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೀತಿತ್ತು ಎಂದು ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಪುರುಷೋತ್ತಮ ಬಿಳಿಮಲೆ ಭಾಷಣದಲ್ಲಿ ಹೇಳಿದ್ದರು. ಅವರು ನೀಡಿದ ಈ ಹೇಳಿಕೆ ಭಾರೀ ವಿವಾದ ಹುಟ್ಟಿಸಿತ್ತು. ಸೋಷಿಯಲ್ ಮೀಡಿಯಾಗಳಲ್ಲಿ ಕೂಡ ವೈರಲ್ ಆಗಿತ್ತು

ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಮುಂದಿನ ವರ್ಷ ಮೇಳವೇ ಕಲಾವಿದರಿಗೆ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದಿದ್ದರು

ಇದು ವೈರಲ್‌ ಆದ ಬಳಿಕ ಬಿಳಿಮಲೆ ಕ್ಷಮೆ ಯಾಚಿಸಿದ್ದಾರೆ. ಯಕ್ಷಗಾನ ಕಲಾವಿದರನ್ನು ಅವಮಾನ ಮಾಡುವ ಉದ್ದೇಶ ನನಗೆ ಇರಲಿಲ್ಲ. ನಾನು ಅವರ ಬಗ್ಗೆ ಯಾವುದೇ ಕೀಳು ಭಾವನೆ ಹೊಂದಿಲ್ಲ. ಯಕ್ಷಗಾನ ಕಲಾವಿದರ ಬದುಕು ಹಸನಾಗಬೇಕು ಎಂಬುದಷ್ಟೇ ನನ್ನ ಆಶಯ. ಆದಾಗ್ಯೂ, ಯಾರಿಗಾದರೂ ನೋವಾಗಿದ್ದರೆ ಅವರಲ್ಲಿ ಕ್ಷಮೆ ಯಾಚಿಸುತ್ತೇನೆ. ಪ್ರಾಧಿಕಾರದ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆಗೆದರೆ ಹೋಗಲು ಸಿದ್ಧ ಎಂದು ಬಿಳಿಮಲೆ ಹೇಳಿದ್ದಾರೆ.

Related Articles

Back to top button
error: Content is protected !!