ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಸುಜ್ಞಾನ ಎಜುಕೇಶನ್ ಟ್ರಸ್ಟ್ನ ಶ್ರೀ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಯಡಾಡಿ-ಮತ್ಯಾಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಕ್ರೀಡಾ ಸಾಧನೆ ಮೆರೆದಿದ್ದಾರೆ.
ಕ್ರೀಡಾಕೂಟದ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡ ಶಾಲೆಯ ವಿದ್ಯಾರ್ಥಿಗಳು, 14 ಮತ್ತು 17ರ ವಯೋಮಾನದ ವಿಭಾಗಗಳಲ್ಲಿಯೂ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿ ಒಟ್ಟಾರೆ ಸಮಗ್ರ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತು, ಕ್ರೀಡಾಸ್ಫೂರ್ತಿ ಹಾಗೂ ಸಂಘಟಿತ ತಂಡದ ಪ್ರಯತ್ನ ಈ ಗಮನಾರ್ಹ ಸಾಧನೆಗೆ ಕಾರಣವಾಗಿದೆ. ವಿದ್ಯಾರ್ಥಿಗಳ ಈ ಯಶಸ್ಸು ಶಾಲೆಯ ಕ್ರೀಡಾ ಕ್ಷೇತ್ರದ ಸಾಧನೆಗೆ ಮತ್ತೊಂದು ಗರಿಮೆಯನ್ನು ತಂದಿದೆ.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಮಸ್ತ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ.