ಇತರೆ

ಯಶ್ ಅಭಿಮಾನಿಗಳ ಸಾವು, ಹೆಚ್ಚಿನ ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ

Views: 55

ನಟ ಯಶ್ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದರು.

ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.

ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ನಟ ಯಶ್ ಮೃತರ ಕುಟುಂಬಿಕರು ನನ್ನು ಬೇಟಿ ನೀಡಿ ಸಾಂತ್ವನ ಹೇಳಿದರು.

Related Articles

Back to top button
error: Content is protected !!