ಜನಮನ

ಯುವತಿಯನ್ನು ಕಾಲುವೆಗೆ ತಳ್ಳಿ ಕೊಲೆ ಆರೋಪ:ಪ್ರಿಯಕರ ಮತ್ತು ಆತನ ತಂದೆ ಅರೆಸ್ಟ್

Views: 305

ಕನ್ನಡ ಕರಾವಳಿ ಸುದ್ದಿ: ಸೂರ್ಯ ಮತ್ತು ಸ್ವಾತಿ ಇಬ್ಬರು ಪ್ರೀತಿಸುತ್ತಿದ್ದರು. ಸ್ವಾತಿ ಪದವಿ ಎರಡನೇ ವರ್ಷ ವ್ಯಾಸಂಗ ಮಾಡುತ್ತಿದ್ದಳು. ಸೂರ್ಯ ಮದುವೆ ಆಗುವುದಕ್ಕೆ ಪೀಡಿಸುತ್ತಿದ್ದ. ಆದರೆ ಇತ್ತ ಸ್ವಾತಿ ಮನೆಯವರು ಓದು ಮುಗಿಯುವವರೆಗೆ ಮದುವೆ ಬೇಡ ಅಂದಿದ್ದಾರೆ. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಕೂಡ ನಡೆದಿತ್ತು.

ಸ್ವಾತಿಯನ್ನು ಸೂರ್ಯ ಮನೆಯಿಂದ ಭದ್ರಾ ಕಾಲುವೆಗೆ ಕರೆದೊಯ್ದು ಅಲ್ಲಿಂದ ತಳ್ಳಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಯುವತಿಯ ಶವ ಪತ್ತೆಯಾಗಿದ್ದು, ಸ್ವಾತಿ ಕುಟುಂಬಸ್ಥರಿಂದ ಸೂರ್ಯ ಮತ್ತು ಕೊಲೆಗೆ ಕುಮ್ಮಕ್ಕು ಹಿನ್ನಲೆ ಆತನ ತಂದೆ ಸ್ವಾಮಿ ಭದ್ರಾವತಿ ಠಾಣೆಗೆ ದೂರು ನೀಡಿದ್ದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಪ್ರಿಯಕರ ಮತ್ತು ಆತನ ತಂದೆಯನ್ನು ಅರೆಸ್ಟ್ ಮಾಡಿದ್ದಾರೆ.

Related Articles

Back to top button
error: Content is protected !!