ಯುವತಿಯ ಶವ ಪತ್ತೆ, ಅಪರಿಚಿತ ಶವ ಎಂದು ಅಂತ್ಯಸಂಸ್ಕಾರ ಮಾಡಿದ ಪೊಲೀಸರು!

Views: 96
ಕನ್ನಡ ಕರಾವಳಿ ಸುದ್ದಿ: ಹಾವೇರಿ ಜಿಲ್ಲೆಯಲ್ಲಿ 22 ವರ್ಷದ ಯುವತಿಯ ಕೊಲೆ ಆಗಿದ್ದು, ಅಪರಿಚಿತ ಶವ ಎಂದುಕೊಂಡು ಪೊಲೀಸರೇ ಅಂತ್ಯಸಂಸ್ಕಾರ ಮಾಡಿರುವ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯ ಕೊಲೆಯಾಗಿರುವ ದೃಢವಾದ ಬೆನ್ನಲ್ಲಿಯೇ ಯಾವುದೇ ಮಾಹಿತಿ ನೀಡದೇ ಅಂತ್ಯಸಂಸ್ಕಾರ ಮಾಡಿದ ಪೊಲೀಸರಿಗೆ ಸಂಕಷ್ಟ ಎದುರಾಗಿದೆ.
22 ವರ್ಷದ ಸ್ವಾತಿ ಮಾರ್ಚ್ 3 ರಂದು ನಾಪತ್ತೆಯಾಗಿದ್ದಳು. ಮೂರು ದಿನಗಳ ಕಾಲ ಮನೆಯವರೆಲ್ಲಾ ಹುಡುಕಿ 7ನೇ ತಾರೀಖಿನಿಂದ ಮಿಸ್ಸಿಂಗ್ ದೂರು ದಾಖಲಿಸಿದ್ದಾರೆ. ಈಕೆಯ ಶವ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಪತ್ತೆಯಾಗಿತ್ತು. ಮಾರ್ಚ್ 6 ರಂದು ಯುವತಿಯ ಮೃತದೇಹ ಸಿಕ್ಕಿತ್ತು.
ಮೊದಲು ಅಪರಿಚಿತ ಯುವತಿ ಶವ ಎಂದು ಘೋಷಿಸಿದ್ದ ಹಲಗೇರಿ ಪೊಲೀಸರು, ವಾರಸುದಾರರರು ಯಾರೂ ಇಲ್ಲದ ಹಿನ್ನಲೆಯಲ್ಲಿ, ಮರಣೋತ್ತರ ಪರೀಕ್ಷೆ ನಡೆಸಿ ಕಾನೂನು ಪ್ರಕಾರ ಸ್ವಾತಿ ಶವ ಹೂತು ಹಾಕಲಾಗಿತ್ತು. ಈ ಹಂತದಲ್ಲಿ ಕನಿಷ್ಠ ಜಿಲ್ಲೆಯಲ್ಲಿ ದಾಖಲಾದ ಮಿಸ್ಸಿಂಗ್ ಕಂಪ್ಲೇಂಟ್‌ಗಳ ಮಾಹಿತಿಯನ್ನೂ ಅವರು ಪಡೆದುಕೊಂಡಿಲ್ಲ. ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢವಾಗಿದೆ. ಇದರ ಬೆನ್ನಲ್ಲಿಯೇ ಹಲಗೇರಿ ಪೊಲೀಸರು ತನಿಖೆ ತೀವ್ರ ಮಾಡಿದ್ದಾರೆ.