ಕರಾವಳಿ

ಯುವತಿ ನಾಪತ್ತೆ

Views: 159

ಮಂಗಳೂರು: ನಗರದ ಬಿಜೈಯ ಯುವತಿಯೋರ್ವಳು ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಕೆಲಿಸ್ತಾ ಫೆರಾವೊ (18) ನಾಪತ್ತೆಯಾದವರು. ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದ ಈಕೆ ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದ್ದರು. ಸಿಸಿ ಕೆಮರಾವೊಂದನ್ನು ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ದಾಖಲಾಗಿತ್ತು.

ಈಕೆಗೆ ಪಬ್‌ಜೀ ಗೇಮ್‌ನ ಅಭ್ಯಾಸವಿತ್ತು. ಈಕೆ 9ನೇ ತರಗತಿಯಲ್ಲಿದ್ದಾಗಲೂ ಪಬ್‌ಜಿ ಆಡುತ್ತಿದ್ದಳು. ಶಾಲೆಯಿಂದ ಮನೆಗೆ ಬಂದ ಮೇಲೆ ವೈಫೈ ಮೂಲಕ ಮನೆಯ ಮೊಬೈಲ್‌ನಲ್ಲಿ ಪಬ್‌ಜಿ ಆಡುತ್ತಿದ್ದಳು. ಈ ಬಗ್ಗೆ ಹೆತ್ತವರು ಹಲವಾರು ಬಾರಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಕೆಲಿಸ್ತಾ ಕನ್ನಡ, ತುಳು, ಇಂಗ್ಲಿಷ್, ಕೊಂಕಣಿ ಭಾಷೆಗಳನ್ನು ಮಾತನಾಡುತ್ತಾಳೆ. ಬಿಳಿ ಟಾಪ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದಳು. ಮಾಹಿತಿ ದೊರೆತವರು ಬರ್ಕೆ ಪೊಲೀಸ್ ಠಾಣೆ (0824-2220522) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Related Articles

Back to top button
error: Content is protected !!