ಶಿಕ್ಷಣ

ಯೋಗಾಸನ ಸ್ಪರ್ಧೆಯಲ್ಲಿ ಪ್ರಾಬಲ್ಯ ಮೆರೆದ ಜನತಾ 3 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Views: 2

ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ವಿಜಯ ಮಕ್ಕಳ ಕೂಟ, ಅತ್ರಾಡಿಯಲ್ಲಿ ಆಯೋಜಿಸಲಾಗಿದ್ದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿ ತಂದಿದ್ದಾರೆ.

14 ವರ್ಷ ವಯೋಮಾನದ ವಿಭಾಗದಲ್ಲಿ ನಡೆದ ಆರ್ಟಿಸ್ಟಿಕ್ ಯೋಗ ವೈಯಕ್ತಿಕ ಸ್ಪರ್ಧೆಯಲ್ಲಿ ವಂಶಿತ್ ಹಾಗೂ ಅಮೂಲ್ಯ ಹಾಗೂ ಸಾಂಪ್ರದಾಯಿಕ ಯೋಗ ಸ್ಪರ್ಧೆಯ ವೈಯಕ್ತಿಕ ವಿಭಾಗದಲ್ಲಿ ಅನುಷ್ಕಾ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ವಯೋಮಾನದ ಸಾಂಪ್ರದಾಯಿಕ ಯೋಗ ಜೋಡಿ ಸ್ಪರ್ಧೆಯಲ್ಲಿ ಅಮೂಲ್ಯ ಮತ್ತು ಅನುಷ್ಕಾ ಪ್ರಥಮ ಸ್ಥಾನ ಗಳಿಸಿದ್ದಾರೆ.

17 ವರ್ಷದೊಳಗಿನ ವಿಭಾಗದ ಆರ್ಟಿಸ್ಟಿಕ್ ಯೋಗ ವೈಯಕ್ತಿಕ ಸ್ಪರ್ಧೆಯಲ್ಲಿ ಸಾನಿಧ್ಯಾ ದ್ವಿತೀಯ ಸ್ಥಾನ ಪಡೆದರೆ, ಸಾಂಪ್ರದಾಯಿಕ ಯೋಗ ಸ್ಪರ್ಧೆಯಲ್ಲಿ ಅನಿಷ್ಕಾ ದ್ವಿತೀಯ ಸ್ಥಾನ ಗಳಿಸಿದ್ದಾರೆ. ರಿದಮಿಕ್ ಯೋಗ ಜೋಡಿ ಸ್ಪರ್ಧೆಯಲ್ಲಿ ಸಾನಿಧ್ಯಾ ಮತ್ತು ಅನಿಷ್ಕಾ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಜಿಲ್ಲಾಮಟ್ಟದಿಂದ ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಶಾಲೆಯ ಮುಖ್ಯ ಶಿಕ್ಷಕಿ, ಯೋಗ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗಳಲ್ಲಿ ಇನ್ನಷ್ಟು ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.

Related Articles

Back to top button
error: Content is protected !!