ಜನಮನ

ರಣ ಬಿಸಿಲಿನ ತಾಪಕ್ಕೆ ಬೆಂದಿದ್ದ ಜನರಿಗೆ ತಂಪೆರದ ಮಳೆರಾಯ, ಉಚ್ಚಂಗೆಮ್ಮನ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಜನ..!

Views: 55

ವಿಜಯನಗರ: ರಣ ಬಿಸಿಲಿನ ತಾಪಕ್ಕೆ ಬೆಂದಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಯುಗಾದಿ ಹಬ್ಬದಂದು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ಕೆಲ ಕಾಲ ಮಳೆ ಸುರಿದಿದೆ.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಹರಪ್ಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ಉಚ್ಚಂಗೆಮ್ಮನ ಜಾತ್ರೆಯಿತ್ತು. ಜಾತ್ರೆ ಸಮಯದಲ್ಲಿ ಮಳೆ ಸುರಿದಿದ್ದು ಜನ ಫುಲ್ ಖುಷಿಯಾಗಿದ್ದಾರೆ. ಕಲ್ಲು ಗುಡ್ಡದಿಂದ ತುಂಬಿದ್ದ ಉಚ್ಚೆಂಗಮ್ಮ ಜಾಗದಲ್ಲಿ ವರುಣ ತಂಪೆರೆದಿದ್ದು, ಕೆಲ ಕಾಲ ಸುರಿದ ಮಳೆಯಲ್ಲಿ ಜನ ಕುಣಿದು ಕುಪ್ಪಳಿಸಿದ್ದಾರೆ.

ಯುಗಾದಿ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಏಪ್ರಿಲ್ 13 ಮತ್ತು 14ರ ಬಳಿಕ ಇಡೀ ರಾಜ್ಯದಲ್ಲಿ ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು, ಮೈಸೂರು, ಧಾರವಾಡ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಬೀದರ್ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಏಪ್ರಿಲ್ ತಿಂಗಳಿನಲ್ಲಿ ಈ ಭಾಗದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.

Related Articles

Back to top button
error: Content is protected !!