ರತನ್ ಟಾಟಾ ಮಾಜಿ ಪ್ರೇಯಸಿ ಸಿಮಿ ಭಾವಪೂರ್ಣ ವಿದಾಯ

Views: 421
ಕನ್ನಡ ಕರಾವಳಿ ಸುದ್ಧಿ: ಬಾಲಿವುಡ್ ಹಿರಿಯ ನಟಿ ಸಿಮಿ ಗರೆವಾಲ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಸಿಮಿ ಅವರು ರತನ್ ಟಾಟಾ ಅವರ ನಿಧನದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಬರೆಯುವ ಮೂಲಕ ಅವರಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.
ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಮಾಜಿ ಪ್ರೇಯಸಿ ಸಿಮಿ ಗರೆವಾಲ್ ಭಾವುಕ ಪೋಸ್ಟ್ ಮಾಡಿದ್ದಾರೆ. ಭಾರತದ ರತ್ನ ಎಂದು ಕರೆಯಲ್ಪಡುವ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ರತನ್ ಟಾಟಾ ಅವರ ಹಠಾತ್ ನಿಧನದ ಸುದ್ದಿ ಕೇಳಿ ಎಲ್ಲರೂ ತೀವ್ರ ದುಃಖಿತರಾಗಿದ್ದಾರೆ. ವ್ಯಾಪಾರ ಜಗತ್ತಿನೊಂದಿಗೆ ಸಂಬಂಧ ಹೊಂದಿರುವ ಪ್ರಸಿದ್ಧ ವ್ಯಕ್ತಿಗಳಿಂದ ಹಿಡಿದು ರಾಜಕೀಯ ಮತ್ತು ಬಾಲಿವುಡ್ ನಟರವರೆಗೂ ಎಲ್ಲರೂ ಸಂತಾಪ ವ್ಯಕ್ತಪಡಿಸಿದ್ದಾರೆ.
ರತನ್ ಟಾಟಾ ಅವರ ನಿಧನದಿಂದ ಬಾಲಿವುಡ್ ಹಿರಿಯ ನಟಿ ಸಿಮಿ ಗರೆವಾಲ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಸಿಮಿ ಅವರು ರತನ್ ಟಾಟಾ ಅವರ ನಿಧನದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಬರೆಯುವ ಮೂಲಕ ಅವರಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.
ಫೋಟೊವೊಂದನ್ನು ಅವರು ಹಂಚಿಕೊಂಡಿದ್ದಾರೆ, ನೀವು ಹೋಗಿದ್ದೀರೆಂದು ಎಲ್ಲರೂ ಹೇಳುತ್ತಿದ್ದಾರೆ, ನೀವು ನಮ್ಮ ಜತೆ ಇಲ್ಲ ಎನ್ನುವ ಸತ್ಯವನ್ನು ಅರಗಿಸಿಕೊಳ್ಳುವುದು ತುಂಬಾ ಕಷ್ಟ, ಹೋಗಿಬನ್ನಿ ನನ್ನ ಸ್ನೇಹಿತ ಎಂದು ಬರೆದಿದ್ದಾರೆ. ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರೊಂದಿಗಿನ ಸಂಬಂಧದ ಬಗ್ಗೆ 2011 ರಲ್ಲಿ ನೀಡಿದ ಸಂದರ್ಶನದಲ್ಲಿ ಖ್ಯಾತ ಹಿಂದಿ ಸಿನಿಮಾ ನಟಿ ಸಿಮಿ ಸ್ವತಃ ಬಹಿರಂಗಪಡಿಸಿದ್ದರು.
ಸಿಮಿ ಅವರು ಪರಿಪೂರ್ಣ ವ್ಯಕ್ತಿ, ಹಾಸ್ಯ ಪ್ರಜ್ಞೆ ಕೂಡ ಚೆನ್ನಾಗಿತ್ತು, ಸಭ್ಯರು, ಎಂದೂ ಶ್ರೀಮಂತಿಕೆ ತೋರ್ಪಡಿಸಿರಲಿಲ್ಲ ಎಂದು ಹೇಳಿದ್ದರು. ಇಷ್ಟು ಆತ್ಮೀಯವಾಗಿದ್ದರೂ ರತನ್ ಹಾಗೂ ಸಿಮಿಯ ಪ್ರೀತಿ ಹೆಚ್ಚು ದಿನ ಉಳಿಯಲಿಲ್ಲ, ಸಿಮಿ ಬೇರೊಬ್ಬರನ್ನು ಮದುವೆಯಾದರು, ಸಾಕಷ್ಟು ವರ್ಷಗಳ ಕಾಲ ಸಿಮಿ ಹಾಗೂ ರತನ್ ಒಳ್ಳೆಯ ಸ್ನೇಹಿತರಾಗಿದ್ದರು ಎಂದಿದ್ದಾರೆ.






